ಮದ್ಯ
(ಪ್ರಾತಿನಿಧಿಕ ಚಿತ್ರ)
ಭೋಪಾಲ್: ಧಾರ್ಮಿಕ ನಗರಗಳಲ್ಲಿ ಮದ್ಯ ನಿಷೇಧ ಮಾಡುವ ಪ್ತಸ್ತಾಪ ಇದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ. ಧಾರ್ಮಿಕ ನಗರಿಗಳ ಪಾವಿತ್ರ್ಯತೆ ಕಾಪಾಡಿಕೊಳ್ಳುವ ಸಲುವಾಗಿ ಹೀಗೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಮದ್ಯ ಮಾರಾಟ ಹಾಗೂ ಸೇವನೆಯಿಂದಾಗಿ ಧಾರ್ಮಿಕ ನಗರಿಗಳ ಪರಿಸರ ಹಾಳಾಗುತ್ತಿದೆ ಎನ್ನುವ ದೂರುಗಳು ಬಂದಿವೆ ಎಂದು ಅವರು ಹೇಳಿದ್ದಾರೆ.
‘ಧಾರ್ಮಿಕ ನಗರಗಳಲ್ಲಿ ಮದ್ಯ ನಿಷೇಧ ಮಾಡುವ ಬಗ್ಗೆ ಸರ್ಕಾರ ಯೋಚನೆ ನಡೆಸುತ್ತಿದೆ. ಈ ಬಗ್ಗೆ ಸಂತರಿಂದ ಸಲಹೆಗಳೂ ಬಂದಿವೆ’ ಎಂದು ಹೇಳಿದ್ದಾರೆ.
ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.