ADVERTISEMENT

ಮಧ್ಯಪ್ರದೇಶ| ರಾಜ್ಯದ 17 ಧಾರ್ಮಿಕ ಸ್ಥಳಗಳಲ್ಲಿ ಮದ್ಯ ಮಾರಾಟ ನಿಷೇಧ: CM ಯಾದವ್​ ​

ಪಿಟಿಐ
Published 24 ಜನವರಿ 2025, 2:45 IST
Last Updated 24 ಜನವರಿ 2025, 2:45 IST
<div class="paragraphs"><p>ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್  </p></div>

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್

   

-ಪಿಟಿಐ ಚಿತ್ರ

ನರಸಿಂಗ್‌ಪುರ (ಮಧ್ಯಪ್ರದೇಶ): ರಾಜ್ಯದ 17 ಧಾರ್ಮಿಕ ಪೂಜಾ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಗುರುವಾರ ಹೇಳಿದ್ದಾರೆ.

ADVERTISEMENT

ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಯಾದವ್‌, ಮದ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಎಲ್ಲರಿಗೂ ಅರಿವಿದೆ. ಯುವಕರು ನಮ್ಮ ದೇಶದ ಭವಿಷ್ಯ. ಅವರು ಹಾಳಾಗುವುದನ್ನು ನಾವು ಬಯಸುವುದಿಲ್ಲ. ನಮ್ಮ ಸರ್ಕಾರ 17 ಧಾರ್ಮಿಕ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಿದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಭಗವಾನ್‌ ಶ್ರೀಕೃಷ್ಣ ಮತ್ತು ರಾಮ ಕಾಲಿಟ್ಟ ಕಡೆಯಲ್ಲ ಮದ್ಯ ಮರಾಟವನ್ನು ನಿಷೇಧಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.