ADVERTISEMENT

ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ಆರೋಗ್ಯ ಸ್ಥಿತಿ ಗಂಭೀರ

ಪಿಟಿಐ
Published 16 ಜೂನ್ 2020, 7:48 IST
Last Updated 16 ಜೂನ್ 2020, 7:48 IST
ಲಾಲ್‌ಜಿ ಟಂಡನ್‌
ಲಾಲ್‌ಜಿ ಟಂಡನ್‌   

ಲಖನೌ: ಇಲ್ಲಿನ ಮೆದಾಂತ ಆಸ್ಪತ್ರೆಗೆ ದಾಖಲಾಗಿರುವ ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಲಾಗಿದೆ.

ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ತೊಂದರೆ ಕಾರಣ ಅವರನ್ನು ಜೂನ್‌ 11ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೋಮವಾರದಿಂದ ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿದೆ. ಅವರಿಗೆ ತುರ್ತಾಗಿ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಐಸಿಯುಗೆ ಅವರನ್ನು ವರ್ಗಾಯಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದೂ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.