ADVERTISEMENT

ಮೂರು ತಿಂಗಳ ಅವಧಿಗೆ ಉಚಿತ ಪಡಿತರ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ

ಪಿಟಿಐ
Published 20 ಏಪ್ರಿಲ್ 2021, 4:01 IST
Last Updated 20 ಏಪ್ರಿಲ್ 2021, 4:01 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಭೋಪಾಲ್: ಮಧ್ಯ ಪ್ರದೇಶದಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಅರ್ಹ ಪಡಿತರ ಚೀಟಿದಾರರಿಗೆ ಮುಂದಿನ ಮೂರು ತಿಂಗಳ ಅವಧಿಗೆ ಉಚಿತ ಪಡಿತರ ನೀಡಲು ಮುಂದಾಗಿದೆ.

ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಉಚಿತ ಪಡಿತರ ಘೋಷಣೆ ಮಾಡಿದ್ದಾರೆ.

ಅಲ್ಲದೆ, ಲಸಿಕೆ ಮತ್ತು ಔಷಧ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ADVERTISEMENT

ರಾಜ್ಯದ ಎಲ್ಲ ಅರ್ಹ ಫಲಾನುಭವಿಗಳಿಗೆ ಉಚಿತ ಪಡಿತರ ನೀಡುವ ಜತೆಗೆ, ಅಗತ್ಯ ವಸ್ತುಗಳ ಲಭ್ಯತೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಸಿಎಂ, ಜನರು ಅವಶ್ಯ ವಸ್ತುಗಳನ್ನು ಪಡಿತರ ವ್ಯವಸ್ಥೆ ಮೂಲಕ ಖರೀದಿಸಿ, ಆಗಾಗ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕೋವಿಡ್ ಔಷಧ, ಇಂಜೆಕ್ಷನ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ದಂಧೆಕೋರರ ವಿರುದ್ಧ ಸೂಕ್ತ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.