ಸಾಂದರ್ಭಿಕ-ಚಿತ್ರ
– ಎ.ಐ ಚಿತ್ರ
ಖಂಡ್ವಾ: ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರವೊಂದರ ಹಾಸಿಗೆಯಲ್ಲಿ ನಾಯಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸ್ವಚ್ಛತಾ ಕಾರ್ಮಿಕನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಖಿಲೌಡ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಸಂಬಂಧ ಸ್ವಚ್ಛತಾ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ವಜಾ ಮಾಡಲಾಗಿದ್ದು, ಕರ್ತವ್ಯ ನಿರತ ನರ್ಸ್ ಅವರ 7 ದಿನಗಳ ಸಂಬಳ ಕಡಿತಗೊಳಿಸಿ ಬ್ಲಾಕ್ ವೈದ್ಯಕೀಯ ಅಧಿಕಾರಿ ಧರ್ಮೇಂದ್ರ ಶರ್ಮಾ ಆದೇಶಿಸಿದ್ದಾರೆ.
ಲೋಪಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಿಷವ್ ಗುಪ್ತಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.