ಭೋಪಾಲ್: ಮಧ್ಯಪ್ರದೇಶ ರಾಜ್ಯದ ಜಬಲ್‌ಪುರ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಜನರ ಮೃತಪಟ್ಟಿದ್ದಾರೆ.
ನ್ಯೂ ಲೈಫ್ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ತುರ್ತು ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅದು ಇಡೀ ಆಸ್ಪತ್ರೆಗೆ ಹರಡಿತು ಎಂದು ಸ್ಥಳೀಯರು ಹೇಳಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದು ಬೆಂಕಿ ನಂದಿಸುವ ಹಾಗೂ ಸ್ಥಳದಲ್ಲಿರುವ ಜನರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
10 ಜನರು ಮೃತಪಟ್ಟಿರುವುದನ್ನು ಪೊಲೀಸರು ಖಚಿತಪಡಿಸಿದ್ದು, ಗಾಯಗೊಂಡವರ ಬಗ್ಗೆ ಅವರು ಮಾಹಿತಿ ನೀಡಿಲ್ಲ.
ಶಾರ್ಟ್ ಸರ್ಕ್ಯೂಟ್ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ತನಿಖೆಗೆ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.