ADVERTISEMENT

ಮಧ್ಯ‍ಪ್ರದೇಶ | ₹50 ಸಾವಿರ ಸಾಲ ತೀರಿಸಲು ಪತ್ನಿಯನ್ನೇ ಮಾರಿದ ಪತಿ!

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 11:20 IST
Last Updated 24 ಜೂನ್ 2025, 11:20 IST
   

ಧಾರ್; ಮಧ್ಯ‍ಪ್ರದೇಶದ ಧಾರ್‌ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಸಾಲ ತೀರಿಸುವ ಸಲುವಾಗಿ ತನ್ನ ಹೆಂಡತಿಯನ್ನೇ ₹50 ಸಾವಿರಕ್ಕೆ ಮಾರಾಟ ಮಾಡಿದ್ದು, ಸ್ನೇಹಿತನೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಇಂದೋರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಅಪರಾಧದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ಪ್ರಕರಣವನ್ನು 'ಶೂನ್ಯ' ಎಫ್‌ಐಆರ್ ಎಂದು ದಾಖಲಿಸಿ, ಧಾರ್ ಪೊಲೀಸರಿಗೆ ವರ್ಗಾಯಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶೂನ್ಯ ಎಫ್ಐಆರ್ ಎಂದರೆ ಅಪರಾಧ ನಡೆದ ಸ್ಥಳದ ಬಗ್ಗೆ ಪರಿಗಣಿಸದೆ, ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿದೆ.

ADVERTISEMENT

'ನನ್ನ ಪತಿ ಜೂಜಾಟ ಆಡುತ್ತಾನೆ. ಈ ಅಭ್ಯಾಸದಿಂದಲೇ ಅವನ ಸಾಲ ಹೆಚ್ಚುತ್ತಲೇ ಇತ್ತು' ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

'ಸಾಲದ ಸುಳಿಯಲ್ಲಿ ಸಿಲುಕಿರುವ ಪತಿ, ಸಾಲ ನೀಡಿದ್ದ ತನ್ನ ಸ್ನೇಹಿತನೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿದ್ದಾನೆ ಎಂದೂ ಸಂತ್ರಸ್ತೆ ಆರೋಪಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಧಾರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಗೀತೇಶ್ ಕುಮಾರ್ ಗರ್ಗ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.