ಸಾವು (ಪ್ರಾತಿನಿಧಿಕ ಚಿತ್ರ)
ಸಿಂಗ್ರೌಲಿ: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಡಂಪರ್ ಟ್ರಕ್‌ವೊಂದು ಬೈಕ್ ಮೇಲೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಕೆಲವು ಬಸ್‌ಗಳು ಹಾಗೂ ಟ್ರಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಅಮಿಲಿಯಾ ಘಾಟಿ ಬಳಿ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ, ‘ಇಬ್ಬರು ಸವಾರರು ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಅದಾನಿ ಸಮೂಹಕ್ಕೆ ಸೇರಿದ ಡಂಪರ್ ಟ್ರಕ್ ಉರುಳಿಬಿದ್ದಿದೆ. ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಐದು ಬಸ್‌ಗಳು ಮತ್ತು ಮೂರು ಡಂಪರ್ ಟ್ರಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಕಾರ್ಖಾನೆ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ್ದಾರೆ. ಪೊಲೀಸರು ಸ್ಥಳೀಯರನ್ನು ತಡೆದಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನೆ ಕುರಿತು ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮನೀಸ್ ಹೇಳಿದ್ದಾರೆ.
ರಾಮಲಲ್ಲು ಯಾದವ್ ಮತ್ತು ರಾಮ ಸಾಗರ್ ಪ್ರಜಾಪತಿ ಮೃತರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.