
ರಾಯ್‌ಸೇನ್ (ಮಧ್ಯ ಪ್ರದೇಶ): ಮಧ್ಯ ಪ್ರದೇಶದ ರಾಯ್‌ಸೇನ್ ಜಿಲ್ಲೆಯಲ್ಲಿ ಗಣೇಶ ವಿಗ್ರಹ ವಿಸರ್ಜನೆಯ ಇಬ್ಬರು ಹದಿಹರೆಯದ ಬಾಲಕರು ಹೊಳೆಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಶನಿವಾರ ರಾತ್ರಿ 8 ಗಂಟೆಗೆ ಘಟಖೇಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಅನುಜ್ ಸಾಹು (16) ನಿತಿನ್ ಸಾಹು (17) ಮೃತಪಟ್ಟವರು.
ಒಂದೇ ಕುಟುಂಬದ ಐವರು ಬಾಲಕರು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಹೋಗಿ ದುರಂತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಹೊಳೆಯ ಕಲ್ಲೊಂದರ ಮೇಲೆ ಅವರು ನಿಂತಿದ್ದಾಗ ಅದು ಉರುಳಿ ಬಿದ್ದು, ಐವರು ನೀರು ಪಾಲಾದರು ಎಂದು ಅವರು ಹೇಳಿದ್ದಾರೆ.
ಈ ವೇಳೆ ಕೆಲವು ಗ್ರಾಮಸ್ಥರು ಸ್ಥಳಕ್ಕೆ ತಲುಪಿ ಅವರನ್ನು ರಕ್ಷಿಸುವ ಕಾರ್ಯ ಪ್ರಾರಂಭಿಸಿದರು. ಸುಮಾರು ಒಂದು ಗಂಟೆಯ ನಂತರ ಅನುಜ್ ಸಾಹು (16) ಮೃತಶರೀರ ಪತ್ತೆಯಾಗಿದ್ದು, ನಿತಿನ್ ಸಾಹು (17) ಅವರನ್ನು ಮೇಲೆತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ ಭೋಪಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಉಳಿದ ಮೂವರು ಬಾಲಕರು ಈಜಿ ದಡ ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.