ADVERTISEMENT

ಅತ್ಯಾಚಾರ ಆರೋಪಿಗಳ ವಿರುದ್ಧ ಸಿಡಿದೆದ್ದ ಜನ; ಸಿಕ್ಕಲ್ಲಿ ಥಳಿತ!

ಏಜೆನ್ಸೀಸ್
Published 7 ಡಿಸೆಂಬರ್ 2019, 10:35 IST
Last Updated 7 ಡಿಸೆಂಬರ್ 2019, 10:35 IST
   

ತಿರುವನಂತಪುರಂ: ಹೈದರಾಬಾದ್‌ ಪಶುವೈದ್ಯೆ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್‌ಕೌಂಟರ್ ಬೆನ್ನಲ್ಲೇ ಕೇರಳಮತ್ತು ಮಧ್ಯಪ್ರದೇಶದಲ್ಲಿ ಲೈಂಗಿಕ ದೌರ್ಜನ್ಯ ಆರೋಪಿಗಳಿಗೆ ಜನರೇ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಶನಿವಾರ ನಡೆದಿದೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಅಪ್ರಾಪ್ತ ಸೋದರಿಯರ ಅತ್ಯಾಚಾರ ಪ್ರಕರಣದ ಆರೋಪಿ ಸಿ.ಮಧು ಎಂಬಾತನ ಮೇಲೆ ದಾಳಿ ನಡೆದಿದೆ. ದಾಳಿಯಿಂದಾಗಿ ಗಂಭೀರ ಗಾಯಗಳಿಂದ ಬಳಲುತ್ತಿದ್ದ ಆರೋಪಿಯನ್ನು ಪಾಲಕ್ಕಾಡ್‌ನಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಮತ್ತು ನಾಲ್ಕೈದು ಜನರ ನಡುವೆ ಘಟನೆ ಕುರಿತು ವಾಗ್ವಾದ ನಡೆದಿದೆ. ಈ ವೇಳೆ ರೊಚ್ಚಿಗೆದ್ದ ಜನರು ಆರೋಪಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪೊಲೀಸರ ತಂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಪಿಯಿಂದ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

2017ರ ಜನವರಿಯಲ್ಲಿ ಪಾಲಕ್ಕಾಡ್‌ನವಲಯಾರ್‌ ಪ್ರದೇಶದ ಶಿಥಿಲಗೊಂಡ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ13 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಸಾವಿಗೂ ಮುನ್ನಬಾಲಕಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿತ್ತು.ಬಾಲಕಿ ಮೃತದೇಹ ಪತ್ತೆಯಾದ ದಿನದಂದು ಮನೆಯಿಂದ ಇಬ್ಬರು ಓಡಿ ಹೋಗಿದ್ದನ್ನು ನೋಡಿರುವುದಾಗಿ 9 ವರ್ಷದ ಸೋದರಿ ತಿಳಿಸಿದ್ದಳು.

ಅದಾದ ಎರಡು ತಿಂಗಳ ಬಳಿಕ ಅದೇ ಸ್ಥಳದಲ್ಲಿ ಅದೇ ಮಾದರಿಯಲ್ಲಿ ಸೋದರಿಯ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಕುರಿತು ಹೇಳಲಾಗಿತ್ತು. ಆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಸಂತ್ರಸ್ತೆಯರ ಮನೆಗೆ ಬಂದು ಹೋಗುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಆದರೆ ಸ್ಥಳೀಯ ನ್ಯಾಯಾಲಯವು ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ರಾಜ್ಯ ಸರ್ಕಾರವು ಇದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ ಮೊರೆ ಹೋಗಿತ್ತು.

ನ್ಯಾಯಾಲಯ ಆವರಣದಲ್ಲೇಹಲ್ಲೆಗೆ ಯತ್ನ

ಇನ್ನೊಂದೆಡೆ ಮಧ್ಯಪ್ರದೇಶದ ಇಂದೋರ್ನಲ್ಲಿ ಕೂಡ ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ಆರೋಪಿಗೆ ಥಳಿಸಲಾಗಿದೆ. ಪ್ರಕರಣದ ವಿಚಾರಣೆಗೆಂದು ಆರೋಪಿಯನ್ನು ನ್ಯಾಯಾಲಯದ ಆವರಣಕ್ಕೆ ಕರೆತಂದಾಗ ವಕೀಲರೇ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.