ಸಾಂದರ್ಭಿಕ ಚಿತ್ರ
ಗುನಾ: ಮಧ್ಯ ಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ನಡೆದ ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ರೀತಿಯ ವದಂತಿಗಳಿಗೆ ಜನರು ಗಮನ ಕೊಡಬಾರದು ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.