ADVERTISEMENT

ಮಧ್ಯಪ್ರದೇಶದ ವೈರಸ್ ಮಹಾರಾಷ್ಟ್ರಕ್ಕೆ ಪ್ರವೇಶಿಸುವುದಿಲ್ಲ: ಸಂಜಯ್ ರಾವುತ್

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2020, 9:02 IST
Last Updated 11 ಮಾರ್ಚ್ 2020, 9:02 IST
ಸಂಜಯ್ ರಾವುತ್
ಸಂಜಯ್ ರಾವುತ್   

ಮುಂಬೈ: ನಮ್ಮ ಪಕ್ಷದ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಸುರಕ್ಷಿತವಾಗಿದೆ. 'ಮಧ್ಯಪ್ರದೇಶದ ವೈರಸ್' ಪಶ್ಚಿಮ ರಾಜ್ಯಕ್ಕೆ ಪ್ರವೇಶಿಸುವುದಿಲ್ಲ ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ತಿಳಿಸಿದ್ದಾರೆ.

ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, 'ಮಹಾರಾಷ್ಟ್ರ ವಿಕಾಸ್ ಅಘಡಿ (MVA) ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಮಧ್ಯಪ್ರದೇಶದ ವೈರಸ್ ಮಹಾರಾಷ್ಟ್ರಕ್ಕೆ ಪ್ರವೇಶಿಸುವುದಿಲ್ಲ. ಮಹಾರಾಷ್ಟ್ರದ ಶಕ್ತಿಯು ಭಿನ್ನವಾಗಿದೆ. ಇಂತದ್ದೇ ಒಂದು ಕಾರ್ಯಾಚರಣೆಯೂ 100 ದಿನಗಳ ಹಿಂದಷ್ಟೇ ನೆಲಕಚ್ಚಿದೆ. ಮಹಾ ವಿಕಾಸ್ ಅಘಡಿ ಸರ್ಕಾರವು ಬೈಪಾಸ್ ಸರ್ಜರಿ ಮಾಡಿತು ಮತ್ತು ಮಹಾರಾಷ್ಟ್ರವನ್ನು ಕಾಪಾಡಿದೆ' ಎಂದು ಮರಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆ ಬಳಿಕ ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿಯಿಂದ ಹೊರನಡೆದ ಶಿವಸೇನಾ, ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಸರ್ಕಾರವನ್ನು ರಚಿಸಿದೆ.

ADVERTISEMENT

ಮಧ್ಯಪ್ರದೇಶದಲ್ಲಿ ಕಮಲ್‌ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದು, ಕೇಂದ್ರದ ಮಾಜಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ರಾಜೀನಾಮೆ ಬಳಿಕ 22 ಶಾಸಕರು ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.