ADVERTISEMENT

ಕಮಲ್‌ ಹಾಸನ್‌ಗೆ ಷರತುಬದ್ಧ ನಿರೀಕ್ಷಣಾ ಜಾಮೀನು

ಪಿಟಿಐ
Published 21 ಮೇ 2019, 2:02 IST
Last Updated 21 ಮೇ 2019, 2:02 IST
ಕಮಲ್‌ ಹಾಸನ್‌
ಕಮಲ್‌ ಹಾಸನ್‌   

ಮಧುರೈ: ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದನಟಮತ್ತು ಮಕ್ಕಳ ನೀದಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್‌ಹಾಸನ್‌ಗೆ ಮದ್ರಾಸ್‌ ಹೈಕೋರ್ಟ್‌ ಷರತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅರವಕುರಿಚಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿ ಪರ ಮಾಡಿದ ಪ್ರಚಾರ ಭಾಷಣದಲ್ಲಿ ಕಮಲ್‌ಹಾಸನ್‌,ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ, ಆತ ನಾಥೂರಾಮ್‌ ಗೋಡ್ಸೆ’ ಎಂದು ಹೇಳಿಕೆ ನೀಡಿದ್ದರು.

ಹಾಸನ್‌ ವಿರುದ್ಧ ಮೇ 14ರಂದು ಎಫ್‌ಐಆರ್‌ ದಾಖಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದನ್ಯಾಯಮೂರ್ತಿ ಆರ್‌.ಪುಗಳೆಂಧಿ ಅವರನ್ನೊಳಗೊಂಡ ವಿಭಾಗೀಯ ಪೀಠ,₹10 ಸಾವಿರದ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಎರಡು ಶೂರಿಟಿ ನೀಡುವಂತೆ ಆದೇಶಿಸಿದೆ.

ADVERTISEMENT

‘ನನ್ನ ಭಾಷಣ ಗೋಡ್ಸೆ ಕೇಂದ್ರಿತವಾಗಿತ್ತೇ ಹೊರತು, ಹಿಂದೂಗಳ ಬಗೆಗಲ್ಲ’ ಎಂದು ಕಮಲ್‌ ಹಾಸನ್‌ ಪ್ರತಿಪಾದಿಸಿದರು.

ಕಮಲ್‌ ಹಾಸನ್‌ ರಾಜಕೀಯ ಪಕ್ಷದ ನಾಯಕರಾಗಿದ್ದು, ಚುನಾವಣಾ ಪ್ರಕ್ರಿಯೆ ಬಾಕಿ ಇರುವುದರಿಂದ ಅವರಿಗೆ ಜಾಮೀನು ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಹಾಸನ್‌ ಹೇಳಿಕೆಗೆ ಬಿಜೆಪಿ, ಎಐಎಡಿಎಂಕೆ ಮತ್ತು ಹಲವು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.