ನವದೆಹಲಿ: ಮೇಘಾಲಯ ಹೈಕೋರ್ಟ್‌ಗೆ ವರ್ಗಾವಣೆ ಆಗಿದ್ದ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಜಯಾ ಕೆ. ತಹಿಲ್ರಾಮಣಿ ತಮ್ಮ ಸ್ಥಾನಕ್ಕೆ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.
ವರ್ಗಾವಣೆ ರದ್ದುಪಡಿಸಲು ಕೋರಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ತಿರಸ್ಕರಿಸಿದ ಬಳಿಕ ತಹಿಲ್ರಾಮಣಿ ಈ ನಿರ್ಧಾರ ಕೈಗೊಂಡಿದ್ದಾರೆ. ವರ್ಗಾವಣೆಯನ್ನು ವಿರೋಧಿಸಿ ರಾಜೀನಾಮೆ ನೀಡುತ್ತಿರುವುದಾಗಿ ತಹಿಲ್ರಾಮಣಿ ಅವರು ಇತರ ನ್ಯಾಯಮೂರ್ತಿಗಳಿಗೆ ತಿಳಿಸಿದ್ದಾರೆ.
ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಸಲ್ಲಿಸಿದ್ದಾರೆ. ಅದರ ಇನ್ನೊಂದು ಪ್ರತಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರಿಗೂ ಕಳುಹಿಸಿದ್ದಾರೆ.
ಕಳೆದ ವರ್ಷ ಆಗಸ್ಟ್ 8ರಂದು ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ತಹಿಲ್ರಾಮಣಿ ಬಡ್ತಿ ಪಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.