ADVERTISEMENT

ಆದಾಯ ತೆರಿಗೆ ಇಲಾಖೆಯಿಂದ ₹1.5 ಕೋಟಿ ದಂಡ: ಟಿವಿಕೆ ಮುಖ್ಯಸ್ಥ ವಿಜಯ್ ಅರ್ಜಿ ವಜಾ

ಪಿಟಿಐ
Published 6 ಫೆಬ್ರುವರಿ 2026, 6:53 IST
Last Updated 6 ಫೆಬ್ರುವರಿ 2026, 6:53 IST
<div class="paragraphs"><p>ವಿಜಯ್</p></div>

ವಿಜಯ್

   

(ಪಿಟಿಐ ಚಿತ್ರ)

ಚೆನ್ನೈ: ಆದಾಯ ತೆರಿಗೆ ಇಲಾಖೆ ₹1.5 ಕೋಟಿ ದಂಡ ವಿಧಿಸಿರುವುದನ್ನು ಪ್ರಶ್ನಿಸಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ.

ADVERTISEMENT

2015-16ರ ಆರ್ಥಿಕ ಸಾಲಿನಲ್ಲಿ ಆದಾಯ ಘೋಷಿಸದ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆಯು ₹1.50 ಕೋಟಿ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ವಿಜಯ್ ಕೋರ್ಟ್ ಮೆಟ್ಟಿಲೇರಿದ್ದರು.

ಈ ಕುರಿತು ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಆದೇಶ ಹೊರಡಿಸಿದ್ದು, ಕಾಲಮಿತಿಯಲ್ಲಿ ತೆರಿಗೆ ಇಲಾಖೆಯು ಕ್ರಮ ಕೈಗೊಂಡಿದ್ದು, ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ಜನವರಿ 23ರಂದು ಆದೇಶವನ್ನು ಕಾಯ್ದಿರಿಸಲಾಗಿತ್ತು.

ಏನಿದು ಪ್ರಕರಣ?

2016-17ರ ಆರ್ಥಿಕ ಸಾಲಿನಲ್ಲಿ ವಿಜಯ್ ₹35.42 ಕೋಟಿ ಆದಾಯ ಘೋಷಿಸಿದ್ದರು. ಆದರೆ 2015ರಲ್ಲಿ ವಿಜಯ್ ನಿವಾಸದ ಮೇಲೆ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ವಶಪಡಿಸಿಕೊಂಡ ಆಧಾರದಲ್ಲಿ ತಮಿಳಿನ 'ಪುಲಿ' ಚಿತ್ರದಿಂದ ಗಳಿಸಿದ ₹15 ಕೋಟಿ ಆದಾಯವನ್ನು ಬಹಿರಂಗಪಡಿಸಿಲ್ಲ ಎಂದು ಆರೋಪಿಸಿತ್ತು.

ದಾಖಲೆಗಳ ಪರಿಶೀಲನೆಗಳ ಆಧಾರದಲ್ಲಿ 2022ರ ಜೂನ್ 30ರಂದು ವಿಜಯ್ ಮೇಲೆ ₹1.50 ಕೋಟಿ ದಂಡ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ವಿಜಯ್ ಮೇಲ್ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.