ಮುಂಬೈ: ದೇಶದಲ್ಲಿ ಕೋವಿಡ್ ಲಸಿಕಾ ಅಭಿಯಾನ ಪ್ರಾರಂಭವಾಗಿ 10 ತಿಂಗಳು ಕಳೆದ ನಂತರದಲ್ಲಿ ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ ದೇಬಶಿಶ್ ಚಕ್ರವರ್ತಿ ಅವರು ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ ಎಂದು ವೈದ್ಯಕೀಯ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.
‘ಲಸಿಕೆಯ ಬಗ್ಗೆ ತನಗೆ ಯಾವುದೇ ದ್ವೇಷವಿಲ್ಲ. ಇದು ತನ್ನ ವೈಯಕ್ತಿಕ ನಿರ್ಧಾರವಾಗಿತ್ತು’ ಎಂದು ದೇಬಶಿಶ್ ಹೇಳಿರುವುದಾಗಿ ವೈದ್ಯಾಧಿಕಾರಿ ತಿಳಿಸಿದರು.
ಡಿಸೆಂಬರ್ 22 ರಂದು ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಗಮನದಲ್ಲಿಟ್ಟುಕೊಂಡು ಚಕ್ರವರ್ತಿ ಅವರು ಲಸಿಕೆ ಪಡೆದಿದ್ದಾರೆ. ಚಳಿಗಾಲದ ಅಧಿವೇಶನಕ್ಕೆ ಹಾಜರಾಗಲು ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ವೈದ್ಯಾಧಿಕಾರಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.