ಮುಂಬೈ (ಪಿಟಿಐ): ಹೋರಾಟಗಾರ ಗೋವಿಂದ ಪಾನ್ಸರೆ ಅವರ ಹತ್ಯೆಗೆ ಸಂಬಂಧಿಸಿದ ದಾಖಲೆಗಳನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ ರಾಜ್ಯ ಭಯೋತ್ಪಾದನಾ ನಿಗ್ರಹ ದಳಕ್ಕೆ (ಎಟಿಎಸ್) ಹಸ್ತಾಂತರಿಸಿದೆ ಎಂದು ಎಟಿಎಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಬಾಂಬೆ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಎಟಿಎಸ್‌ಗೆ ವರ್ಗಾಯಿಸಿತ್ತು.
2015 ಫೆಬ್ರುವರಿ 16ರಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪಾನ್ಸರೆ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರು ಫೆ.20ರಂದು ಮೃತಪಟ್ಟಿದ್ದರು.
ಮೊದಲು ಸಿಐಡಿಯ ವಿಶೇಷ ತನಿಖಾ ತಂಡ ಪ್ರಕರಣದ ತನಿಖೆ ಕೈಗೊಂಡು ಕೆಲವರನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.