ADVERTISEMENT

ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ನೀಡಿದ ‘ಮಹಾ‘ ಸಿಎಂ ಠಾಕ್ರೆ ಕಾರ್ಯದರ್ಶಿ

ಪಿಟಿಐ
Published 14 ಆಗಸ್ಟ್ 2021, 9:26 IST
Last Updated 14 ಆಗಸ್ಟ್ 2021, 9:26 IST
ಉದ್ಧವ್‌ ಠಾಕ್ರೆ
ಉದ್ಧವ್‌ ಠಾಕ್ರೆ    

ಮುಂಬೈ: ‘ತನ್ನ ಕೆಲವು ಬೇಡಿಕೆಗಳನ್ನು ಈಡೇರಿಸದಿದ್ದರೆ, ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ದೂರು ನೀಡುವುದಾಗಿ ಅಪರಿಚಿತ ವ್ಯಕ್ತಿಯೊಬ್ಬರು ನನಗೆ ವಾಟ್ಸ್‌ಆ್ಯಪ್‌ ಮೂಲಕ ಬೆದರಿಕೆಯ ಮೆಸೇಜ್‌ ಕಳುಹಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಆಪ್ತ ಕಾರ್ಯದರ್ಶಿ ಮಿಲಿಂದ್ ನಾರ್ವೇಕರ್ ಅವರು ಮುಂಬೈ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.

‘ತನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ, ನನ್ನ ವಿರುದ್ಧ ಸಿಬಿಐ, ಇಡಿ, ಎನ್‌ಐಎ ಸೇರಿದಂತೆ ವಿವಿಧ ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ದೂರು ನೀಡುವುದಾಗಿ ಬೆದರಿಕೆ ಅಪರಿಚಿತ ವ್ಯಕ್ತಿ ಮೆಸೇಜ್‌ಗಳನ್ನು ಕಳುಹಿಸುತ್ತಿದ್ದಾರೆ‘ ಎಂದು ನಾರ್ವೇಕರ್ ಅವರು ಪೊಲೀಸ್‌ ಕಮಿಷನರ್‌ ಹೇಮಂತ್‌ ನಾಗರಾಳೆ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ವಿವರಿಸಿದ್ದಾರೆ.

‘ನಾರ್ವೇಕರ್ ಅವರು ಸಲ್ಲಿಸಿರುವ ಲಿಖಿತ ದೂರನ್ನು ಆಧರಿಸಿ ಮುಂಬೈ ಕ್ರೈಮ್‌ ಬ್ರಾಂಚ್‌ ತನಿಖೆ ಆರಂಭಿಸಿದೆ. ಶಂಕಿತನ ಪತ್ತೆಗೆ ಶೋಧ ಕಾರ್ಯ ಕೈಗೊಳ್ಳಲಾಗಿದೆ‘ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.