ADVERTISEMENT

ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆ: ಅಘಾಡಿಗೆ ಬಲ

ಪಿಟಿಐ
Published 3 ಫೆಬ್ರುವರಿ 2023, 14:05 IST
Last Updated 3 ಫೆಬ್ರುವರಿ 2023, 14:05 IST
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ   

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ) ಅಭ್ಯರ್ಥಿ ಧಿರಾಜ್ ಲಿಂಗಡೆ ಅವರು ಬಿಜೆಪಿ ಅಭ್ಯರ್ಥಿ ರಂಜಿತ್‌ ಪಾಟೀಲ್‌ ಅವರನ್ನು ಪರಾಭವಗೊಳಿಸಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಅಮರಾವತಿ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಲಿಂಗಡೆ ಅವರು 46,344 ಮತಗಳನ್ನು ಪಡೆದಿದ್ದರೆ, ರಂಜಿತ್‌ ಪಟೇಲ್‌ ಅವರು 42,962 ಮತಗಳನ್ನು ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಧಾನಪರಿಷತ್ತಿನ ಐದು ಸ್ಥಾನಗಳಿಗೆ ಜ.30ರಂದು ಚುನಾವಣೆ ನಡೆದಿತ್ತು. ನಾಲ್ಕು ಕ್ಷೇತ್ರಗಳ ಫಲಿತಾಂಶ ಗುರುವಾರ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಒಟ್ಟು ಮೂರು ಕ್ಷೇತ್ರಗಳಲ್ಲಿ ಶಿವಸೇನಾ (ಉದ್ಧವ್‌) ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಎಂವಿಎ ಜಯಭೇರಿ ಬಾರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.