ADVERTISEMENT

ಕೋವಿಡ್‌| ಮಹಾರಾಷ್ಟ್ರದಲ್ಲಿ ಗಂಭೀರ ಸ್ಥಿತಿ, ಕೇಂದ್ರದಿಂದ ನೆರವಿನ ಭರವಸೆ: ಪವಾರ್‌

ಮಹಾರಾಷ್ಟ್ರದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚಳ

ಪಿಟಿಐ
Published 8 ಏಪ್ರಿಲ್ 2021, 8:16 IST
Last Updated 8 ಏಪ್ರಿಲ್ 2021, 8:16 IST
ಶರದ್‌ ಪವಾರ್‌
ಶರದ್‌ ಪವಾರ್‌   

ಮುಂಬೈ: ‘ಮಹಾರಾಷ್ಟ್ರದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಈ ಪಿಡುಗಿನ ವಿರುದ್ಧ ಹೋರಾಡಲು ಎಲ್ಲ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ’ ಎಂದು ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಗುರುವಾರ ತಿಳಿಸಿದ್ದಾರೆ.

‘ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರೊಂದಿಗೆ ಬುಧವಾರ ಮಾತನಾಡಿದ್ದೇನೆ. ಕೋವಿಡ್‌ನಿಂದಾಗಿ ಸೃಷ್ಟಿಯಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ಮಹಾರಾಷ್ಟ್ರ ಮತ್ತು ಇತರೆ ರಾಜ್ಯಗಳಿಗೆ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದು ಪವಾರ್‌ ಫೇಸ್‌ಬುಕ್‌ ಲೈವ್‌ನಲ್ಲಿ ತಿಳಿಸಿದರು.

‘ಮಹಾರಾಷ್ಟ್ರದಲ್ಲಿ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಇದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕೆಲವೊಂದು ನಿರ್ಬಂಧಗಳನ್ನು ಹೇರಿವೆ. ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿದೆ. ನಮ್ಮೆಲ್ಲರ ಪ್ರಾಣವನ್ನು ಉಳಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದೆ’ ಎಂದು ಹೇಳಿದರು.

ADVERTISEMENT

‘ಮಹಾರಾಷ್ಟ್ರ ಸರ್ಕಾರವು ಸೋಂಕು ಪ್ರಸರಣವನ್ನು ತಡೆಯಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಲ್ಲದ ವಸ್ತುಗಳನ್ನು ಮಾರಾಟ ಮಡುವ ಅಂಗಡಿಗಳನ್ನು ಏಪ್ರಿಲ್‌ 30ರ ವರೆಗೆ ಮುಚ್ಚಲು ಸರ್ಕಾರ ಆದೇಶಿಸಿದ’ ಎಂದು ಪವಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.