ADVERTISEMENT

ಮಹಾರಾಷ್ಟ್ರ: 3.1 ತೀವ್ರತೆಯ ಭೂಕಂಪ

ಪಿಟಿಐ
Published 15 ಆಗಸ್ಟ್ 2020, 9:11 IST
Last Updated 15 ಆಗಸ್ಟ್ 2020, 9:11 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಸತಾರ: ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭೂಮಿ ಕಂಪಿಸಿದೆ. ಕಂಪನದ ತೀವ್ರತೆ ಪ್ರಮಾಣವು ರಿಕ್ಟರ್‌ ಮಾಪಕದಲ್ಲಿ3.1ರಷ್ಟು ದಾಖಲಾಗಿದೆ.ಯಾವುದೇ ಸಾವು– ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 10.22ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಸತಾರದ ಕೊಯ್ನಾ ಅಣೆಕಟ್ಟಿನಿಂದ 13.60 ಕಿ.ಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT