ADVERTISEMENT

ಮಹಾರಾಷ್ಟ್ರ:ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು; ಐವರು ಮಹಿಳೆಯರ ರಕ್ಷಣೆ

ಪಿಟಿಐ
Published 12 ಸೆಪ್ಟೆಂಬರ್ 2021, 6:41 IST
Last Updated 12 ಸೆಪ್ಟೆಂಬರ್ 2021, 6:41 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಠಾಣೆ: ಮಹಾರಾಷ್ಟ್ರದ ಠಾಣೆಯಲ್ಲಿ ವೇಶ್ಯಾವಾಟಿಕೆ ಜಾಲವೊಂದನ್ನು ಪೊಲೀಸರು ಭೇದಿಸಿದ್ದು, ಒಬ್ಬರನ್ನು ಬಂಧಿಸಿದ್ದಾರೆ.

‘ನಿಖರ ಮಾಹಿತಿ ಮೇರೆಗೆ ಉಲ್ಲಾಸನಗರ ಅಪರಾಧ ವಿಭಾಗದ ಮಾನವ ಕಳ್ಳಸಾಗಣೆ ವಿರೋಧಿ ಘಟಕವು ವಿಠಲವಾಡಿ ಪ್ರದೇಶದ ಅಶೋಲೆ ಗ್ರಾಮದಲ್ಲಿರುವ ವಸತಿಗೃಹವೊಂದರ ಮೇಲೆ ದಾಳಿ ನಡೆಸಿದೆ. ಈ ಸಂಬಂಧ ಲಾಡ್ಜ್‌ ಮಾಲೀಕನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ವಕ್ತಾರೆ ಜಯಮಾಲಾ ವಾಸವೇ ತಿಳಿಸಿದ್ದಾರೆ.

‘ಐವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಅವರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಲಾಡ್ಜ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.