ADVERTISEMENT

ಮಹಾರಾಷ್ಟ್ರ: ಅ.8ರಿಂದ ‘ಕವಚ ಕುಂಡಲ ಮಿಷನ್‌’ ಆರಂಭ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 12:49 IST
Last Updated 7 ಅಕ್ಟೋಬರ್ 2021, 12:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ (ಪಿಟಿಐ): ಮಹಾರಾಷ್ಟ್ರ ಸರ್ಕಾರವು ಅಕ್ಟೋಬರ್‌ 8 ರಿಂದ 14 ರವರೆಗೆ ‘ಮಿಷನ್‌ ಕವಚ ಕುಂಡಲ‘ ಎಂಬ ವಿಶೇಷ ಲಸಿಕಾ ಅಭಿಯಾನ ಆರಂಭಿಸಲಿದೆ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್‌ ತೋಪೆ ಗುರುವಾರ ಹೇಳಿದ್ದಾರೆ.

ಅಕ್ಟೋಬರ್‌ 15 ರೊಳಗೆ ಕೇಂದ್ರ ಸರ್ಕಾರ 100 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿರುವುದರಿಂದ ಈ ಅಭಿಯಾನ ಕೈಗೊಳ್ಳಲಾಗಿದೆ. ಇದರ ಮೂಲಕ ಪ್ರತಿದಿನ 15 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತೋ‍ಪೆ ಸುದ್ದಿಗಾರರಿಗೆ ತಿಳಿಸಿದರು.

ರಾಜೇಶ್‌ ತೋಪೆ ಅವರು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಅವರೊಂದಿಗೆ ಬುಧವಾರ ಈ ಕುರಿತು ಚರ್ಚೆ ನಡೆಸಿದ್ದರು.

ADVERTISEMENT

‘ನಾವು ಅಕ್ಟೋಬರ್‌ 8 ರಿಂದ 14 ರವರೆಗೆ ‘ಮಿಷನ್ ಕವಚ ಕುಂಡಲ’ ಅನ್ನು ಆರಂಭಿಸುತ್ತೇವೆ. ಇದರ ಅಡಿ ನಾವು ಪ್ರತಿದಿನ 15 ಲಕ್ಷ ಜನರಿಗೆ ಲಸಿಕೆ ಹಾಕಲು ಯೋಜಿಸಿದ್ದೇವೆ’ ಎಂದು ಅವರು ಹೇಳಿದರು.

ಕೋವಿನ್ ಆಪ್‌ ಪ್ರಕಾರ, ಗುರುವಾರ ಮಧ್ಯಾಹ್ನದವರೆಗೆ ದೇಶದಲ್ಲಿ 92.85 ಕೋಟಿ ಡೋಸ್‌ಗಳನ್ನು ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಇದುವರೆಗೆ 8.54 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.