ADVERTISEMENT

ಎಂಪಿಎಸ್‌ಸಿ, ಯುಪಿಎಸ್‌ಸಿ: ಮಹಾರಾಷ್ಟ್ರದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ತರಬೇತಿ

ಪಿಟಿಐ
Published 7 ಆಗಸ್ಟ್ 2021, 10:04 IST
Last Updated 7 ಆಗಸ್ಟ್ 2021, 10:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಔರಂಗಬಾದ್‌: ಒಬಿಸಿ ಪ್ರವರ್ಗದ ಎರಡು ಸಾವಿರ ವಿದ್ಯಾರ್ಥಿಗಳಿಗೆ, ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ (ಎಂಪಿಎಸ್‌ಸಿ) ಪರೀಕ್ಷೆಗಳಿಗೆ ಮತ್ತು ಒಂದು ಸಾವಿರ ವಿದ್ಯಾರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಗಳಿಗೆ ತರಬೇತಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ವಿಜಯ್ ವಡೆಟ್ಟಿವಾರ್ ಶನಿವಾರ ತಿಳಿಸಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ಪ್ರತಿ ವರ್ಷ 25 ವಿದ್ಯಾರ್ಥಿಗಳಿಗೆ ಪೈಲಟ್ ತರಬೇತಿ ನೀಡುವ ಕುರಿತು ವಿಮಾನಯಾನ ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ‘ ಎಂದು ಹೇಳಿದರು.

ರಾಜ್ಯ ಸರ್ಕಾರ ಈಗಾಗಲೇ ‘ಮಹಾಜ್ಯೋತಿ‘ (ಮಹಾತ್ಮ ಜ್ಯೋತಿಬಾ ಫುಲೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ) ಯೋಜನೆಗೆ ₹150 ಕೋಟಿ ಹಣ ಮಂಜೂರು ಮಾಡಿದೆ, ಅದರಲ್ಲಿ ₹40 ಕೋಟಿಗಳನ್ನು ವಿತರಿಸಿದೆ‘ ಎಂದು ಅವರು ಹೇಳಿದರು.

ADVERTISEMENT

‘ಮಹಾಜ್ಯೋತಿ‘ ಯೋಜನೆಯಡಿ ಈ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.