ADVERTISEMENT

ಎತ್ತಿನ ಗಾಡಿ ಓಟದ ಸ್ಪರ್ಧೆ | ತೀರ್ಪು ಸ್ವಾಗತಿಸಿದ ಮಹಾರಾಷ್ಟ್ರ ಸರ್ಕಾರ

ಪಿಟಿಐ
Published 18 ಮೇ 2023, 14:14 IST
Last Updated 18 ಮೇ 2023, 14:14 IST

ನವದೆಹಲಿ: ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರದ ನಿಲುವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಮಹಾರಾಷ್ಟ್ರ ಸರ್ಕಾರ ಸ್ವಾಗತಿಸಿದೆ.

‘ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಎತ್ತು, ಓಟದ ಸ್ಪರ್ಧೆಗಾಗಿಯೇ ಇರುವಂತಹ ಪ್ರಾಣಿ ಎಂಬ ವಾದವನ್ನು ನಾವು ನ್ಯಾಯಾಲಯದ ಮುಂದಿಟ್ಟಿದ್ದೆವು. ನ್ಯಾಯಾಲಯ ಇದನ್ನು ಪುರಸ್ಕರಿಸಿದೆ. ನಮ್ಮ ಪರವಾಗಿ ತೀರ್ಪು ಬಂದಿರುವುದು ಖುಷಿ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಎತ್ತಿನ ಗಾಡಿ ಓಟದ ಸ್ಪರ್ಧೆಗಳನ್ನು ಆಯೋಜಿಸುವುದಕ್ಕೆ ಈ ತೀರ್ಪು ದಾರಿ ಮಾಡಿಕೊಟ್ಟಿದೆ’ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಸಂತಸ ವ್ಯಕ್ತಪಡಿಸಿದ್ದಾರೆ. 

‘ಎತ್ತಿನ ಗಾಡಿ ಓಟದ ಸ್ಪರ್ಧೆ ಆಯೋಜನೆಗೆ ಅಗತ್ಯವಿರುವ ಎಲ್ಲಾ ಬಗೆಯ ನೆರವು ಹಾಗೂ ಸಹಕಾರವನ್ನು ನಾವು ಒದಗಿಸುತ್ತೇವೆ’ ಎಂದು ಅಬಕಾರಿ ಸಚಿವ ಶಂಭುರಾಜ್‌ ದೇಸಾಯಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.