ADVERTISEMENT

ಹಣ ಅಕ್ರಮ ವರ್ಗಾವಣೆ: ದೇಶಮುಖ್‌ ಪುತ್ರನೂ ಭಾಗಿ - ಇ.ಡಿ

ಪಿಟಿಐ
Published 22 ನವೆಂಬರ್ 2021, 20:15 IST
Last Updated 22 ನವೆಂಬರ್ 2021, 20:15 IST
ಅನಿಲ್ ದೇಶಮುಖ್‌
ಅನಿಲ್ ದೇಶಮುಖ್‌   

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರ ಪುತ್ರ ಹೃಷಿಕೇಶ್‌ ದೇಶಮುಖ್‌ ಕೂಡಹಣಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ವಿಶೇಷ ನ್ಯಾಯಾಲಯಕ್ಕೆ ಸೋಮವಾರ ತಿಳಿಸಿದೆ.

ಅಕ್ರಮವಾಗಿ ಸಂಪಾದಿಸಿದ ಹಣವನ್ನು, ವಿವಿಧ ಕಂಪನಿಗಳ ಸಂಕೀರ್ಣ ಜಾಲದೊಳಕ್ಕೆ ಸೇರಿಸಲು ತಮ್ಮ ತಂದೆಗೆ ನೆರವಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿಇ.ಡಿ ತಿಳಿಸಿದೆ.

ಬಂಧನದಿಂದ ರಕ್ಷಣೆ ಕೋರಿ ಹೃಷಿಕೇಶ್‌ ಅವರು ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿದರೆ, ಅವರು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಪ್ರಕರಣದ ಪ್ರಾಥಮಿಕ ತನಿಖೆಯ ಪ್ರಕಾರ, ಅನಿಲ್‌ ದೇಶಮುಖ್‌ ಹಾಗೂ ಅವರ ಕುಟುಂಬದವರಿಗೆ ಸೇರಿದ 11 ಕಂಪನಿಗಳು ಇದರಲ್ಲಿ ಭಾಗಿಯಾಗಿವೆ ಎಂದೂ ಇ.ಡಿ ಹೇಳಿದೆ.

ADVERTISEMENT

ಹೃಷಿಕೇಶ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಡಿ.4ಕ್ಕೆ ನಿಗದಿಪಡಿಸಿತು.

ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಹಾಗೂ ಹಣಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನಿಲ್‌ ದೇಶಮುಖ್‌ ಅವರನ್ನು ಜಾರಿ ನಿರ್ದೇಶನಾಲಯ ನ.1ರಂದು ಬಂಧಿಸಿದ್ದು, ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.