ಅಪಘಾತ
Credit: iStock Photo
ಮಹಾಕುಂಭನಗರ: ಛತ್ತೀಸಗಢದಿಂದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಎಸ್‌ಯುವಿ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಯಮುನಾನಗರ ಡಿಸಿಪಿ ವಿವೇಕ್ ಚಂದ್ರ ಯಾದವ್ ತಿಳಿಸಿದ್ದಾರೆ.
ಮೃತರನ್ನು ಛತ್ತೀಸಗಢದ ಕೊರ್ಬಾ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ 19 ಮಂದಿಯನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಯಾದವ್ ಹೇಳಿದ್ದಾರೆ.
ಕೂಡಲೇ ಘಟನಾ ಸ್ಥಳದಲ್ಲಿ ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.