
ಬೆಂಕಿ ಅವಘಡ
(ಸಾಂಕೇತಿಕ ಚಿತ್ರ)
ಮಹಾಕುಂಭ ನಗರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು (ಸೋಮವಾರ) ಮತ್ತೆ ಬೆಂಕಿ ಅವಘಡ ಸಂಭವಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸೆಕ್ಟರ್ 8ರ 'ಕಪಿ ಮಾನಸ ಮಂಡಲ'ದ ಡೇರೆಗಳಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಆಗಬಹುದಾದ ಅನಾಹುತ ತಪ್ಪಿದೆ. 'ಕಪಿ ಮಾನಸ ಮಂಡಲ'ದ ಎರಡು ಡೇರೆಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿಯ ಕುಂಭಮೇಳದಲ್ಲಿ ಜನವರಿ 19, 25 ಮತ್ತು ಫೆಬ್ರುವರಿ 7 ಸೇರಿದಂತೆ ಇತ್ತೀಚೆಗೆ ಬೆಂಕಿ ಅವಘಡಗಳು ವರದಿಯಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.