ನವದೆಹಲಿ: ಮಹಾ ಕುಂಭಕ್ಕೆ ತೆರಳುವವರ ಅನುಕೂಲಕ್ಕಾಗಿ ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ಸಂಖ್ಯೆ ಹೆಚ್ಚಿಸಲಾಗಿದೆ. ಪ್ರಯಾಣ ದರದಲ್ಲಿ ಸ್ಥಿರತೆ ತರಲಾಗಿದೆ ಎಂದು ವಿಮಾನಯಾನ ಸಂಸ್ಥೆ ಇಂಡಿಗೊ ಗುರುವಾರ ಹೇಳಿದೆ.
ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ಪ್ರಯಾಣ ದರದಲ್ಲಿ ಭಾರಿ ಏರಿಕೆ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಪ್ರಯಾಣ ದರದಲ್ಲಿ ಸ್ಥಿರತೆ ತರಬೇಕು ಹಾಗೂ ಈ ಮಾರ್ಗದಲ್ಲಿ ಹೆಚ್ಚುವರಿ ವಿಮಾನಗಳ ಹಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ವಿಮಾನಯಾನ ಸಚಿವಾಲಯ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಿತ್ತು.
ಇದೇ ವಿಚಾರವಾಗಿ, ಸಚಿವ ಪ್ರಲ್ಹಾದ ಜೋಷಿ ಅವರು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೂ (ಡಿಜಿಸಿಎ) ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ, ಇಂಡಿಗೊ ಕ್ರಮ ಕೈಗೊಂಡಿದೆ.
ಪ್ರಯಾಗ್ ರಾಜ್ ಮಾರ್ಗದಲ್ಲಿ ಸಂಚರಿಸುವ ವಿಮಾನಗಳ ಸಂಖ್ಯೆಯನ್ನು 900ಕ್ಕೆ ಹೆಚ್ಚಿಸಲಾಗಿದೆ. ವಿಮಾನಗಳ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಲು ಯೋಜಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.