ಮಹಾಕುಂಭಮೇಳ
ಮಹಾಕುಂಭ ನಗರ: ಪ್ರಯಾಗ್‌ರಾಜ್‌ನ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈವರೆಗೆ 40 ಕೋಟಿಗೂ ಅಧಿಕ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮೂಲಗಳು ತಿಳಿಸಿವೆ.
ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿ ನದಿಗಳ ಸಂಗಮ ಸ್ಥಳದಲ್ಲಿ ಶುಕ್ರವಾರ 48 ಲಕ್ಷ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ಭಕ್ತರು ಅಮೃತ ಸ್ನಾನಕ್ಕಾಗಿ ಪ್ರಯಾಗ್‌ರಾಜ್‌ನತ್ತ ಹರಿದು ಬರುತ್ತಿದ್ದಾರೆ.
ಈಗಾಗಲೇ 'ಮಕರ ಸಂಕ್ರಾಂತಿ', 'ಮೌನಿ ಅಮಾವಾಸ್ಯೆ' ಮತ್ತು 'ವಸಂತ ಪಂಚಮಿ' ಸೇರಿದಂತೆ ಮೂರು ಪ್ರಮುಖ 'ಅಮೃತ ಸ್ನಾನ' ಕಾರ್ಯಕ್ರಮಗಳು ನೇರವೇರಿದೆ.
ಈ ಪೈಕಿ ಮೌನಿ ಅಮಾವಾಸ್ಯೆಯಂದು ಅತಿ ಹೆಚ್ಚು ಎಂಟು ಕೋಟಿ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಹಾಗೆಯೇ ಮಕರ ಸಂಕ್ರಾಂತಿಯಂದು 3.5 ಕೋಟಿ ಮತ್ತು ವಸಂತ ಪಂಚಮಿಯಂದು 2.57 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಪವಿತ್ರ ಸ್ನಾನ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಸೋಮವಾರ ಸಂಗಮಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ಮಹಾಕುಂಭಮೇಳವು ಫೆಬ್ರುವರಿ 26ರಂದು ಮುಕ್ತಾಯಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.