ಅಪಘಾತ
–ಪ್ರಾತಿನಿಧಿಕ ಚಿತ್ರ
ರೇವಾ: ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ 10.30ರ ಸುಮಾರಿಗೆ ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಎಸ್‌ಯುವಿ ಚಾಲಕ ಚಾಲನೆ ವೇಳೆ ನಿದ್ರೆಗೆ ಜಾರಿದ್ದು, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಅವಘಡದಲ್ಲಿ ಮೂವರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.