ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮ ಅವರು ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಭಾನುವಾರ ಪವಿತ್ರ ಸ್ನಾನ ಮಾಡಿದರು
ಪಿಟಿಐ ಚಿತ್ರ
ಮಹಾಕುಂಭ ನಗರ (ಉತ್ತರ ಪ್ರದೇಶ): ಮಹಾಕುಂಭ ಮೇಳ ನಡೆಯುತ್ತಿದ್ದು, ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮ ಅವರು ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಭಾನುವಾರ ಪವಿತ್ರ ಸ್ನಾನ ಮಾಡಿದ್ದಾರೆ.
ಬಳಿಕ ಸಮೀಪದ ಹನುಮ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
‘ನಂಬಿಕೆ, ಭಕ್ತಿ, ಏಕತೆಯ ಮಹಾ ಸಂಗಮ, ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ–2025ರಲ್ಲಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಅನನ್ಯ ಅವಕಾಶ ದೊರೆತಿದೆ. ರಾಜ್ಯದ ಎಲ್ಲ ಜನರ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದೆ’ ಎಂದು ‘ಎಕ್ಸ್’ನಲ್ಲಿ ಶರ್ಮ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.