ADVERTISEMENT

ಹೊತ್ತಿ ಉರಿದ ಭೂಗತ ವಿದ್ಯುತ್ ಕೇಬಲ್: ಒಬ್ಬರು ಸಾವು

ಪಿಟಿಐ
Published 10 ಮಾರ್ಚ್ 2023, 12:54 IST
Last Updated 10 ಮಾರ್ಚ್ 2023, 12:54 IST

ಠಾಣೆ: ಮಹಾರಾಷ್ಟ್ರದ ಠಾಣೆ ನಗರದ ಶಿಲಾ ಪಾಟಾ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಭೂಗತವಾಗಿ ಅಳವಡಿಸಿದ್ದ ವಿದ್ಯುತ್‌ ಕೇಬಲ್‌ಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಟೈರ್ ಅಂಗಡಿಗೆ ಸುತ್ತುವರಿದ ಪರಿಣಾಮ 35 ವರ್ಷದ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಬೆಳಿಗ್ಗೆ 6.30ಕ್ಕೆ ಶಿಲ್‌ನ ಹೋಟೆಲ್ ಬಳಿ ಸಂಭವಿಸಿದೆ ಎಂದು ಠಾಣೆ ಮಹಾನಗರ ಪಾಲಿಕೆಯ (ಟಿಎಂಸಿ) ಪ್ರಾದೇಶಿಕ ಆಪತ್ತು ನಿರ್ವಹಣಾ ವಿಭಾಗದ (ಆರ್‌ಡಿಎಂಸಿ) ಮುಖ್ಯಸ್ಥ ಅವಿನಾಶ್ ಸಾವಂತ್ ತಿಳಿಸಿದ್ದಾರೆ.

ಬೆಂಕಿ ಹೊತ್ತಿ ಉರಿದ ಪರಿಣಾಮ ಹತ್ತಿರದ ಟೈರ್ ಅಂಗಡಿಗೂ ಸುತ್ತುವರಿದು ಆ ಸಂದರ್ಭದಲ್ಲಿ ಅಂಗಡಿಯಲ್ಲಿ ಮಲಗಿದ್ದ ವಿಶಾಲ್ ಸಿಂಗ್ ಎಂಬುವವರು ಸುಟ್ಟು ಕರಕಲಾಗಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದಾವಿಸಿದವು. ಮೃಹದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಘಟನೆ ಕುರಿತು ಶಿಲ್‌ನ ದೈಘರ್ ಪೊಲೀಸ್ ಠಾಣೆಯು ಶೋಧ ಕಾರ್ಯ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.