ADVERTISEMENT

ಭಾರತ್ ಜೋಡೊ ಯಾತ್ರೆ: ಟ್ರಕ್‌ ಡಿಕ್ಕಿ , ತಮಿಳುನಾಡು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 12:37 IST
Last Updated 11 ನವೆಂಬರ್ 2022, 12:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಔರಂಗಾಬಾದ್: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ತಮಿಳುನಾಡಿನ ಗಣೇಶ್‌ ಪೊನ್ರಾಮನ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದು,ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ನಾಂದೇಡ್‌ನಲ್ಲಿ ರಾಹುಲ್ ಗಾಂಧಿ ಅವರ ಸಾರ್ವಜನಿಕ ರ್‍ಯಾಲಿಯಲ್ಲಿ ಭಾಗವಹಿಸಿದ ಬಳಿಕ ರಾತ್ರಿ ಶಿಬಿರಕ್ಕಾಗಿ ಅರ್ಧಾಪುರ ತಹಸಿಲ್‌ನ ಪಿಂಪಲ್‌ಗಾಂವ್ ಮಹಾದೇವ್ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ರಾತ್ರಿ 8.20 ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ‘ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪ್ರೀತಿಯ ಒಡನಾಡಿಯನ್ನು ಕಳೆದುಕೊಂಡಿದ್ದೇವೆ’ ಎಂದು ವಿಷಾದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.