ADVERTISEMENT

ಮಹಾರಾಷ್ಟ್ರದಲ್ಲಿ ಲಘು ಭೂಕಂಪನ

ಪಿಟಿಐ
Published 9 ನವೆಂಬರ್ 2020, 6:35 IST
Last Updated 9 ನವೆಂಬರ್ 2020, 6:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪಲ್ಗಾರ್‌: ಮಹಾರಾಷ್ಟ್ರದ ಪಾಲ್ಗಾರ್‌ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಭೂಮಿ ಕಂಪಿಸಿದ್ದು, ಯಾವುದೇ ಪ್ರಾಣ ಮತ್ತು ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ಸೋಮವಾರ ಬೆಳಿಗ್ಗೆ 5.31ಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್‌ ಮಾಪನದಲ್ಲಿಇದರ ತೀವ್ರತೆ 3.4 ದಾಖಲಾಗಿತ್ತು ಎಂದು ಜಿಲ್ಲೆಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ವಿವೇಕಾನಂದ ಕದಂ ಅವರು ತಿಳಿಸಿದರು.

ಕಳೆದ ತಿಂಗಳು ಕೂಡ ಪಾಲ್ಗಾರ್‌ ಜಿಲ್ಲೆಯಲ್ಲಿ ಒಂದೆರಡು ಬಾರಿ ಭೂಮಿ ನಡುಗಿದ ಅನುಭವ ಆಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.