ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ 865 ಗ್ರಾಮ ಪಂಚಾಯಿತಿಗಳ ಪೈಕಿ 618ಕ್ಕೆ ಮುಂದಿನ ತಿಂಗಳು ಚುನಾವಣೆ ನಡೆಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಅವರು ಹೇಳಿದರು.
ಜನವರಿ 15ರಂದು ಮತದಾನ ನಡೆಯಲಿದ್ದು, ಅದೇ ತಿಂಗಳ 18ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಡಳಿತ ಶನಿವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
611 ಪಂಚಾಯಿತಿಗಳ ಅಧಿಕಾರಾವಧಿ ಈ ತಿಂಗಳ ಅಂತ್ಯದಲ್ಲಿ ಮುಗಿಯಲಿದೆ. ಇನ್ನುಳಿದ ಏಳು ಗ್ರಾಮ ಪಂಚಾಯಿತಿಗಳ ಅವಧಿ ಏಪ್ರಿಲ್‌ನಲ್ಲಿ ಮುಕ್ತಾಯವಾಗಿತ್ತು.
ಡಿಸೆಂಬರ್ 23ರಿಂದ 30ರೊಳಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ಜನವರಿ 4ರಂದು ನಾಮಪತ್ರ ಹಿಂಪಡೆಯುವ ಕೊನೆ ದಿನವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.