ಠಾಣೆ: ಜಿಲ್ಲೆಯ ಕಲ್ಯಾಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಜಿನೇಶ್ ಠಕ್ಕರ್ ಎಂಬುವವರೇ ಹತ್ಯೆಗೀಡಾದವರು. ವ್ಯವಹಾರಕ್ಕೆ ಸಂಬಂಧಿಸಿದ ದ್ವೇಷವೇ ಈ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರುಶನಿವಾರ ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ವಸತಿ ಸಮುಚ್ಚಯದ ಬಳಿ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ಠಕ್ಕರ್ ಅವರ ದೇಹದಲ್ಲಿ ನಾಲ್ಕು ಬುಲೆಟ್‌ಗಳು ಹೊಕ್ಕಿದ್ದು, ಅವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.