ADVERTISEMENT

ಔರಂಗಾಬಾದ್ ಹೆಸರು ಬದಲಿಸುವ ವಿವಾದ: ರೈಲ್ವೆ ನಿಲ್ದಾಣದಲ್ಲಿ ಬಿಗಿ ಭದ್ರತೆ

ಪಿಟಿಐ
Published 5 ಜನವರಿ 2021, 10:34 IST
Last Updated 5 ಜನವರಿ 2021, 10:34 IST
ಮಹಾರಾಷ್ಟ್ರ ಪೊಲೀಸರ ಪ್ರಾತಿನಿಧಿಕ ಚಿತ್ರ (ಪಿಟಿಐ)
ಮಹಾರಾಷ್ಟ್ರ ಪೊಲೀಸರ ಪ್ರಾತಿನಿಧಿಕ ಚಿತ್ರ (ಪಿಟಿಐ)   

ಔರಂಗಾಬಾದ್: ಔರಂಗಾಬಾದ್‌ ನಗರದ ಹೆಸರು ಬದಲಿಸುವ ಕುರಿತ ವಿವಾದದ ಕುರಿತಂತೆ ಅಹಿತಕರ ಘಟನೆ ತಡೆಯಲು ಮುಂಜಾಗ್ರತೆಯಾಗಿ ರೈಲ್ವೆ ಪೊಲೀಸರು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಭದ್ರತೆಯನ್ನು ಇನ್ನಷ್ಟು ಬಲಪಡಿಸಿದ್ದಾರೆ.

ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಿಸಬೇಕು ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ಮುನ್ನೆಲೆಗೆ ಬಂದಿದ್ದು, ಪರ ವಿರೋಧದ ಮಾತುಗಳು ಕೇಳಿಬರುತ್ತಿವೆ.

ಮುಂಜಾಗ್ರತೆಯಾಗಿ ರೈಲ್ವೆ ಪೊಲೀಸ್ ಪಡೆ (ಆರ್‌ಪಿಎಫ್‌) ಮತ್ತು ಸರ್ಕಾರಿ ರೈಲ್ವೆ ಪೊಲೀಸರನ್ನು (ಜಿಆರ್‌ಪಿ) ನಿಯೋಜಿಸಿದ್ದು, ಗಸ್ತು ಹೆಚ್ಚಿಸಲಾಗಿದೆ ಎಂದು ಅರ್‌ಪಿಎಫ್‌ ಇನ್‌ಸ್ಪೆಕ್ಟರ್ ಅರವಿಂದ ಕುಮಾರ್ ಶರ್ಮಾ ತಿಳಿಸಿದ್ದಾರೆ.

ADVERTISEMENT

ಅಧಿಕೃತ ಟಿಕೆಟ್‌ ಉಳ್ಳ ಜನರಿಗಷ್ಟೇ ಫ್ಲಾಟ್‌ಫಾರ್ಮ್‌ನಲ್ಲಿ ಕಾಯಲು ಅವಕಾಶ ನೀಡಲಾಗುತ್ತಿದೆ ಎಂದು ಭದ್ರತಾ ಹೊಣೆ ಉಸ್ತುವಾರಿ ಹೊತ್ತ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.