ಚಿತ್ರ ಕೃಪೆ: ‘ಎಕ್ಸ್’
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ದೇಶದ ಜನತೆಗೆ ಮಹಾ ಶಿವರಾತ್ರಿಯ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, 'ಇದು ಶಿವನಿಗೆ ಅರ್ಪಿತವಾದ ಹಬ್ಬ. ಈ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯ ತರಲಿ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನಮ್ಮ ಸಂಕಲ್ಪ ಮತ್ತಷ್ಟು ಧೃಡವಾಗಲಿ' ಎಂದು ತಿಳಿಸಿದ್ದಾರೆ.
'ಮಹಾ ಶಿವರಾತ್ರಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಪರಮಾತ್ಮ ಮಹಾದೇವನ ಆಶೀರ್ವಾದ ನಮ್ಮೆಲ್ಲರ ಮೇಲೆ ಇರಲಿ. ನಮ್ಮ ದೇಶವು ಪ್ರಗತಿಯ ಪಥದಲ್ಲಿ ಮುಂದುವರಿಯಲಿ ಎಂದು ನಾನು ಪ್ರಾರ್ಥಿಸುತ್ತೇನೆ' ಎಂದು ರಾಷ್ಟ್ರಪತಿ ಮುರ್ಮು 'ಎಕ್ಸ್' ಪೋಸ್ಟ್‌ನಲ್ಲಿ ಹೇಳಿದ್ದಾರೆ.
'ಪವಿತ್ರ ಹಬ್ಬ ಮಹಾ ಶಿವರಾತ್ರಿಯ ಶುಭಾಶಯಗಳು! ಶಿವನ ಆಶೀರ್ವಾದ ಯಾವಾಗಲೂ ನಿಮ್ಮ ಮೇಲೆ ಇರಲಿ. ಹರ ಹರ ಮಹಾದೇವ್' ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 'ಎಕ್ಸ್' ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
'ನಾಡಬಂಧುಗಳಿಗೆ ಮಹಾ ಶಿವರಾತ್ರಿಯ ಶುಭಾಶಯಗಳು. ಸತ್ಯ, ಶ್ರದ್ಧೆ, ನಂಬಿಕೆಗಳ ಸಾಕಾರಮೂರ್ತಿಯಾದ ಶಿವನ ಅನುಗ್ರಹ ತಮ್ಮೆಲ್ಲರ ಮೇಲಿರಲಿ, ಸುಖ, ಶಾಂತಿ, ನೆಮ್ಮದಿ ಶಾಶ್ವತವಾಗಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ 'ಎಕ್ಸ್'ನಲ್ಲಿ ತಿಳಿಸಿದ್ದಾರೆ.
'ನಾಡಿನ ಸಮಸ್ತ ಜನತೆಗೆ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು. ಪರಮೇಶ್ವರನ ಕೃಪೆಯಿಂದ ನಿಮ್ಮೆಲ್ಲರ ಬದುಕಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಶಿವ ಶಕ್ತಿಯ ಜ್ಯೋತಿ ಸದಾ ಪ್ರಕಾಶಿಸಲಿ' ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಎಕ್ಸ್'ನಲ್ಲಿ ತಿಳಿಸಿದ್ದಾರೆ.
'ಪರಮಾತ್ಮ ಪರಮೇಶ್ವರನು ಎಲ್ಲರಿಗೂ ಸಮೃದ್ಧಿ, ಉತ್ತಮ ಆರೋಗ್ಯ, ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ' ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.
'ನಾಡಿನ ಸಮಸ್ತ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ಸರ್ವಶಕ್ತ ಪರಮೇಶ್ವರನು ಈ ಶುಭ ದಿನದಂದು ಎಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ಹೊತ್ತು ತರಲಿ. ಶಿವನ ಕೃಪೆ ತಮ್ಮೆಲ್ಲರ ಮೇಲೆ ಇರಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ 'ಎಕ್ಸ್' ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.