ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದರಿಂದ ಮೂವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾರ್ಶಿ ತಾಲ್ಲೂಕಿನ ಪಟಾಕಿ ತಯಾರಿಕಾ ಘಟಕದೊಳಗೆ ಮಧ್ಯಾಹ್ನ 3 ಗಂಟೆಗೆ ಸ್ಫೋಟ ಸಂಭವಿಸಿ, ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.