ADVERTISEMENT

ನಾಸಿಕ್‌ನ ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

ಪಿಟಿಐ
Published 1 ಜನವರಿ 2023, 16:18 IST
Last Updated 1 ಜನವರಿ 2023, 16:18 IST
ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡ
ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡ   

ನಾಸಿಕ್ (ಪಿಟಿಐ): ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟು, 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ–ಆಗ್ರಾ ಹೆದ್ದಾರಿಯ ಮುಂಢೇಗಾವ್‌ನಲ್ಲಿರುವ ಜಿಂದಾಲ್‌ ಪೊಲಿ ಫಿಲ್ಮ್ಸ್‌ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ 11.30ರ ಸುಮಾರಿಗೆ ಅವಘಡ ಸಂಭವಿಸಿದೆ. ಸಮೀಪದ ಹಳ್ಳಿಗಳಿಗೂ ಸ್ಫೋಟದ ಶಬ್ದ ಕೇಳಿಸಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ADVERTISEMENT

ಬಳಿಕ, ‘ಅಗ್ನಿ ದುರಂತಕ್ಕೆ ಕಾರಣ ಏನೆಂದು ಈವರೆಗೆ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು. ಮೃತರ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು’ ಎಂದು ಅವರು ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.