ADVERTISEMENT

ಕೊರೊನಿಲ್ ಔಷಧ ಮಾರಾಟಕ್ಕೆ ಮಹಾರಾಷ್ಟ್ರದಲ್ಲಿ ಅವಕಾಶವಿಲ್ಲ: ಅನಿಲ್ ದೇಶ್‌ಮುಖ್

ಪಿಟಿಐ
Published 25 ಜೂನ್ 2020, 11:26 IST
Last Updated 25 ಜೂನ್ 2020, 11:26 IST
ಯೋಗಗುರು ಬಾಬಾ ರಾಮ್‌ದೇವ್ ಅವರು ಬಿಡುಗಡೆ ಮಾಡಿದ ‘ಕೊರೊನಿಲ್’ ಔಷಧ–ಪಿಟಿಐ ಚಿತ್ರ
ಯೋಗಗುರು ಬಾಬಾ ರಾಮ್‌ದೇವ್ ಅವರು ಬಿಡುಗಡೆ ಮಾಡಿದ ‘ಕೊರೊನಿಲ್’ ಔಷಧ–ಪಿಟಿಐ ಚಿತ್ರ   

ಮುಂಬೈ: ಕೊರೊನಾ ತಡೆಗೆ ಅಭಿವೃದ್ಧಿಪಡಿಸಲಾಗಿದೆ ಎಂದು ಬಾಬಾ ರಾಮ್‌ದೇವ್ ಅವರು ಹೇಳಿಕೊಂಡಿರುವ ಔಷಧಿಯನ್ನು ‘ನಕಲಿ’ ಎಂದು ಕರೆದಿರುವ ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್‌ಮುಖ್, ಅದರ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತಂಜಲಿ ಆಯುರ್ವೇದ ಸಂಸ್ಥೆ ಅಭಿವೃದ್ಧಿಪಡಿಸಿರುವಕೊರೊನಿಲ್ ಔಷಧವು ಏಳು ದಿನಗಳಲ್ಲಿ ಕೊರೊನಾ ಸೋಂಕು ನಿವಾರಿಸುತ್ತದೆ ಎಂದು ರಾಮ್‌ದೇವ್‌ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು.

ಟ್ವೀಟ್ ಮಾಡಿರುವ ಅವರು, ‘ಜೈಪುರದ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಕೊರೊನಿಲ್ ಔಷಧದ ಕ್ಲಿನಿಕಲ್ ಟ್ರಯಲ್ ನಡೆದಿದೆಯೇ ಇಲ್ಲವೇ ಎಂದು ಪರಿಶೀಲಿಸಲಿದೆ. ಇಂತಹ ಸಂದೇಹಸ್ಪದ ಔಷಧವನ್ನು ರಾಜ್ಯದಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವುದಿಲ್ಲ ಎಂದು ರಾಮ್‌ದೇವ್ ಅವರಿಗೆ ಎಚ್ಚರಿಕೆ ನೀಡ ಬಯಸುತ್ತೇನೆ’ ಎಂದು ಅವರು ಉಲ್ಲೇಖಿಸಿದ್ದಾರೆ.

ADVERTISEMENT

ಔಷಧ ಬಿಡುಗಡೆಯಾದ ಕೆಲ ಹೊತ್ತಿನಲ್ಲೇ ಮಧ್ಯಪ್ರವೇಶಿಸಿದ್ದ ಆಯುಷ್ ಇಲಾಖೆ, ಔಷಧಿಯನ್ನು ಪರೀಕ್ಷೆಗೆ ಒಳಪಡಿಸುವ ತನಕ ಅದರ ಪ್ರಚಾರಕ್ಕೆ ತಡೆ ನೀಡುವಂತೆ ಪತಂಜಲಿ ಸಂಸ್ಥೆಗೆ ಸೂಚಿಸಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.