ADVERTISEMENT

ಮಹದಾಯಿಗೆ ಅಣೆಕಟ್ಟು: ಕಾಮಗಾರಿ ಸ್ಥಳಕ್ಕೆ ಭೇಟಿಗೆ ಅನುಮತಿ ಕೋರಿ ಜಿಎಫ್‌ಪಿ ಪತ್ರ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 15:39 IST
Last Updated 21 ಮಾರ್ಚ್ 2021, 15:39 IST
ಮಹದಾಯಿ ನದಿ
ಮಹದಾಯಿ ನದಿ   

ಪಣಜಿ: ಮಹದಾಯಿ ನದಿಗೆ ಅಣೆಕಟ್ಟು ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ರಾಜ್ಯದ ಪ್ರತಿನಿಧಿಗಳಿರುವ ತಂಡ ಭೇಟಿ ನೀಡಲು ಅನುಮತಿ ನೀಡುವಂತೆ ಕೋರಿ ಗೋವಾ ಫಾರ್ವರ್ಡ್‌ ಪಾರ್ಟಿ (ಜಿಎಫ್‌ಪಿ) ಶಾಸಕ ವಿಜಯ್‌ ಸರ್ದೇಸಾಯಿ ಅವರು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

‘ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದ ಕುರಿತ ಪ್ರಕರಣದ ವಿಚಾರಣೆ ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವಾಗ ಕರ್ನಾಟಕ ಅಣೆಕಟ್ಟು ನಿರ್ಮಿಸುವ ಕಾರ್ಯ ಕೈಗೆತ್ತಿಕೊಂಡಿದೆ’ ಎಂದು ಗೋವಾ ಇತ್ತೀಚೆಗೆ ಆರೋಪಿಸಿತ್ತು.

‘ಸುಪ್ರೀಂಕೋರ್ಟ್‌ನ ಮಾರ್ಗಸೂಚಿ ಪ್ರಕಾರ ರಚಿತವಾದ ಜಂಟಿ ಪರಿಶೀಲನಾ ತಂಡ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಲು ಅನುಮತಿ ನೀಡಬೇಕು. ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಈ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ಆದೇಶವನ್ನು ಗೌರವಿಸಲಿದೆ ಎಂಬ ಭರವಸೆ ಹೊಂದಿದ್ದೇವೆ’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.