ADVERTISEMENT

ಕ್ರಿಕೆಟಿಗ ರಾಬಿನ್‌ ಉತ್ತಪ್ಪಗೆ ED ನೋಟಿಸ್‌: ಸೆ. 22ರಂದು ಹಾಜರಾಗಲು ಸೂಚನೆ

ಪಿಟಿಐ
Published 16 ಸೆಪ್ಟೆಂಬರ್ 2025, 7:35 IST
Last Updated 16 ಸೆಪ್ಟೆಂಬರ್ 2025, 7:35 IST
<div class="paragraphs"><p>ರಾಬಿನ್‌ ಉತ್ತಪ್ಪ</p></div>

ರಾಬಿನ್‌ ಉತ್ತಪ್ಪ

   

ನವದೆಹಲಿ: ಬೆಟ್ಟಿಂಗ್‌ ಆ್ಯಪ್ ಮೂಲಕ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಕರ್ನಾಟಕದ ರಾಬಿನ್ ಉತ್ತಪ್ಪ ಅವರಿಗೆ ಜಾರಿ ನಿರ್ದೇಶನಾಲಯವು ಇಂದು (ಮಂಗಳವಾರ) ಸಮನ್ಸ್ ಜಾರಿ ಮಾಡಿದೆ. ಸೆ. 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

1xBet ಹೆಸರಿನ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಉತ್ತಪ್ಪ ಅವರನ್ನು ಹಣದ ಅಕ್ರಮ ವರ್ಗಾವಣೆ (ಪಿಎಂಎಲ್ಎ) ಅಡಿಯಲ್ಲಿ ಹೇಳಿಕೆ ದಾಖಲಿಸುವಂತೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 22 ರಂದು ವಿಚಾರಣೆಗೆ ಒಳಗಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ADVERTISEMENT

ಉತ್ತಪ್ಪ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಸಮನ್ಸ್ ಜಾರಿಯಾದ ಮೂರನೇ ಭಾರತೀಯ ಕ್ರಿಕೆಟಿಗರಾಗಿದ್ದಾರೆ. ಇದಕ್ಕೂ ಮೊದಲು ಇಡಿ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್‌ಗೆ ಸಮನ್ಸ್ ನೀಡಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 15ರಂದು ಟಿಎಂಸಿ ಮಾಜಿ ಸಂಸದ ಹಾಗೂ ನಟ ಮಿಮಿ ಚಕ್ರವರ್ತಿ ಕೂಡ ಇಡಿ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಬಂಗಾಳಿ ನಟ ಅಂಕುಶ್ ಹಜ್ರಾಗೆ ಸಮನ್ಸ್ ನೀಡಲಾಗಿದ್ದು, ಅವರು ಮಂಗಳವಾರ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಕಳೆದ 18 ವರ್ಷಗಳಿಂದ ಇರುವ 1xBet ಆ್ಯಪ್‌ನಲ್ಲಿ ಹಲವು ಕ್ರೀಡೆಗಳಿಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿತ್ತು. ಭಾರತಸಲ್ಲಿ ಇದರ ಪ್ರಚಾರ ಮಾಡಿದ್ದ ನಟಿ ಊರ್ವಶಿ ರೌಟೇಲಾ ಅವರು ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಅವರಿಗೂ ಕೂಡ ಮಂಗಳವಾರ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಗಿತ್ತು. ಇಡಿ ನಡೆಸುತ್ತಿರುವ ತನಿಖೆಯು ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳಿಗೆ ಸಂಬಂಧಿಸಿದ್ದಾಗಿದ್ದು, ಈ ಆ್ಯಪ್‌ಗಳು ಹಲವರಿಗೆ ಕೋಟ್ಯಂತರ ರೂಪಾಯಿ ಹಣ ಮತ್ತು ತೆರಿಗೆಯನ್ನೂ ವಂಚಿಸಿವೆ ಎಂದು ಹೇಳಲಾಗುತ್ತಿದೆ.

ಕಂಪನಿಯ ಪ್ರಕಾರ, 1xBet ಸಂಸ್ಥೆಯು ಬೆಟ್ಟಿಂಗ್ ಉದ್ಯಮದಲ್ಲಿ 18 ವರ್ಷಗಳಿಂದ ಜಾಗತಿಕವಾಗಿ ಗುರುತಿಸಲ್ಪಟ್ಟ ಬುಕ್‌ಮೇಕರ್ ಆಗಿದೆ. ಬ್ರ್ಯಾಂಡ್‌ನ ಗ್ರಾಹಕರು ಸಾವಿರಾರು ಕ್ರೀಡೆಗಳಲ್ಲಿ ಬೆಟ್ಟಿಂಗ್ ಮಾಡಬಹುದು. ಕಂಪನಿಯ ವೆಬ್‌ಸೈಟ್ ಮತ್ತು ಅಪ್ಲಿಕೇಶನ್ 70 ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.