ADVERTISEMENT

Bihar Election ‘ಮಹಾಘಟಬಂಧನ’ ಗೆದ್ದರೆ ವಕ್ಫ್‌ ಕಾಯ್ದೆ ಕಸದ ಬುಟ್ಟಿಗೆ: ತೇಜಸ್ವಿ

ಪಿಟಿಐ
Published 29 ಜೂನ್ 2025, 14:24 IST
Last Updated 29 ಜೂನ್ 2025, 14:24 IST
ತೇಜಸ್ವಿ ಯಾದವ್
ತೇಜಸ್ವಿ ಯಾದವ್   

‍ಪಾಟ್ನಾ: ಬಿಹಾರದಲ್ಲಿ ‘ಮಹಾಘಟಬಂಧನ’ ಮೈತ್ರಿಕೂಟವು ಅಧಿಕಾರಕ್ಕೇರಿದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯಲಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.

ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ‘ವಕ್ಫ್‌ ಉಳಿಸಿ, ಸಂವಿಧಾನ ಉಳಿಸಿ’ ರ್‍ಯಾಲಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನೆಯ ಸಂಕೇತವಾಗಿ ಕಪ್ಪು ಪಟ್ಟಿ ಧರಿಸಿದ್ದರು.

‘ಆರ್‌ಜೆಡಿಯು ವಕ್ಫ್‌ ಕಾಯ್ದೆಯನ್ನು ಪ್ರಬಲವಾಗಿ ವಿರೋಧಿಸುತ್ತದೆ ಎಂದು ನಮ್ಮ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್‌ ಸ್ಪಷ್ಟಪಡಿಸಿದ್ದಾರೆ. ನಮ್ಮ ಪಕ್ಷದ ಸಂಸದರು ಇದನ್ನು ಸಂಸತ್ತಿನ ಎರಡೂ ಸದನಗಳಲ್ಲಿ ವಿರೋಧಿಸಿದ್ದಾರೆ. ವಕ್ಫ್‌ ಕಾಯ್ದೆ ವಿರೋಧಿಸಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ’ ಎಂದಿದ್ದಾರೆ.

ADVERTISEMENT

‘ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಪತನಗೊಳ್ಳುವ ಹಾದಿಯಲ್ಲಿದೆ ಎಂಬುದನ್ನು ರಾಜ್ಯದ ನನ್ನ ಮುಸ್ಲಿಂ ಸಹೋದರರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕೇಳಿಕೊಳ್ಳುತ್ತೇನೆ. ನವೆಂಬರ್‌ನಲ್ಲಿ, ರಾಜ್ಯದಲ್ಲಿ ಬಡವರ ಪರವಾಗಿರುವ ಹೊಸ ಸರ್ಕಾರ ಸ್ಥಾಪಿಸಲಾಗುವುದು ಮತ್ತು ಅದು ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯಲಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.