ಸಂಚಾರ ದಟ್ಟಣೆ
ಪಟ್ನಾ: ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಲು ಪ್ರಯಾಗ್‌ರಾಜ್‌ನತ್ತ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿರುವುದರಿಂದ ಬಿಹಾರದ ಸಾಸಾರಾಂ– ರೋಹ್ಟಗಿ ಜಿಲ್ಲೆಗಳ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ಸುಮಾರು 45 ಕಿ.ಮೀ.ವರೆಗೂ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಬಿಹಾರ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ಪ್ರಯಾಗ್ ರಾಜ್ ಮಾರ್ಗದಲ್ಲಿ ದೊಡ್ಡ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ. ಈ ಪರಿಣಾಮ ಗಡಿ ಜಿಲ್ಲೆಗಳಾದ ಸಾಸಾರಾಂ, ರೋಹ್ಟಗಿ ಜಿಲ್ಲೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.
ಕೆಲ ಭಕ್ತರು ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರೇ ಮತ್ತೆ ಕೆಲವರು ರಸ್ತೆ ಬದಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
ಪ್ರಯಾಗ್‌ರಾಜ್‌ನತ್ತ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದರಿಂದ ಸೋಮವಾರ 300 ಕಿ.ಮೀ.ವರೆಗೂ ಸಂಚಾರ ದಟ್ಟಣೆ ಉಂಟಾಗಿತ್ತು.
48 ಗಂಟೆಗಳಿಂದ ಹೆದ್ದಾರಿಯಲ್ಲಿ ಸಿಲುಕಿದ್ದೇವೆ. 50 ಕಿ.ಮೀ. ಅಂತರ ಕ್ರಮಿಸಲು 10ರಿಂದ 12 ಗಂಟೆ ಸಮಯ ಕಳೆಯಿತು’ ಎಂದು ಪ್ರಯಾಣಿಕರೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.