ಸತ್ಯೇಂದ್ರ ದಾಸ್
-ಪಿಟಿಐ ಚಿತ್ರ
ಲಖನೌ: ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ (ಬ್ರೈನ್ ಸ್ಟ್ರೋಕ್) ಬಳಲುತ್ತಿದ್ದಾರೆ. ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
85 ವರ್ಷದ ಸತ್ಯೇಂದ್ರ ದಾಸ್ ಅವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಭಾನುವಾರ ಎಸ್‌ಜಿಪಿಜಿಐಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುದಿಂದ ಬಳಲುತ್ತಿದ್ದಾರೆ. ಜತೆಗೆ, ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಸತ್ಯೇಂದ್ರ ದಾಸ್ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.