ADVERTISEMENT

ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯ ಐಸಿಯುಗೆ ಬೆಂಕಿ: 10 ಕೋವಿಡ್‌ ರೋಗಿಗಳ ದುರ್ಮರಣ

ಪಿಟಿಐ
Published 6 ನವೆಂಬರ್ 2021, 9:30 IST
Last Updated 6 ನವೆಂಬರ್ 2021, 9:30 IST
ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯ ಐಸಿಯು  ಅಗ್ನಿ ಅವಘಡಕ್ಕೆ ತುತ್ತಾಗಿರುವುದು (ಪಿಟಿಐ)
ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯ ಐಸಿಯು ಅಗ್ನಿ ಅವಘಡಕ್ಕೆ ತುತ್ತಾಗಿರುವುದು (ಪಿಟಿಐ)   

ಪುಣೆ: ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಕೋವಿಡ್‌ ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸಿವಿಲ್ ಆಸ್ಪತ್ರೆಯ ಐಸಿಯುಗೆ ಬೆಂಕಿ ಬಿದ್ದು 10 ರೋಗಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ರೋಗಿಯು ಗಂಭೀರವಾಗಿದ್ದಾರೆ,’ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ ಖಚಿತಪಡಿಸಿದ್ದಾರೆ.

ಬೆಂಕಿ ಬಿದ್ದ ಐಸಿಯುನಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ADVERTISEMENT

ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಹ್ಮದ್‌ನಗರ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಶಂಕರ್ ಮಿಸಾಲ್ ತಿಳಿಸಿದ್ದಾರೆ.

ಐಸಿಯುಗೆ ಬೆಂಕಿಬಿದ್ದ ಹಿನ್ನೆಲೆಯಲ್ಲಿ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುತ್ತಿರುವುದು
ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.