ಜಲಗಾಂವ್: ಮಹಾರಾಷ್ಟ್ರದಲ್ಲಿ ಟ್ರಕ್ ಉರುಳಿ ಸಂಭವಿಸಿದ ದುರ್ಘಟನೆಯಲ್ಲಿ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ಜಲಗಾಂವ್ ಜಲ್ಲೆಯಲ್ಲಿ ಭಾನುವಾರ ತಡ ರಾತ್ರಿ ಅವಫಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರೆಲ್ಲರೂ ಅಭೋದಾ, ಕೆರ್ಹಾಲಾ ಮತ್ತು ರಾವರ್ ಪ್ರದೇಶಕ್ಕೆ ಸೇರಿದ ಕಾರ್ಮಿಕರು ಎಂದು ಗುರುತಿಸಲಾಗಿದೆ.
ಪಪ್ಪಾಯಿ ತುಂಬಿದ ಟ್ರಕ್, ಕಿಂಗಾವ್ ಗ್ರಾಮದ ದೇವಾಲಯವೊಂದರ ಬಳಿ ಉರುಳಿತ್ತು.
ಇದನ್ನೂ ಓದಿ:ಹಿಮಪಾತ ಅವಘಡ: ಮೃತರ ಸಂಖ್ಯೆ 50ಕ್ಕೆ ಏರಿಕೆ
ಘಟನೆಯಲ್ಲಿ ಐವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಹಿಂದಿನ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.