ADVERTISEMENT

ಮಹಾರಾಷ್ಟ್ರ CM ಏಕನಾಥ ಶಿಂದೆ, ಪುತ್ರ ಶ್ರೀಕಾಂತ್‌ಗೆ ಬೆದರಿಕೆ: ವಿದ್ಯಾರ್ಥಿ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಫೆಬ್ರುವರಿ 2024, 12:57 IST
Last Updated 24 ಫೆಬ್ರುವರಿ 2024, 12:57 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಅವರ ಪುತ್ರ, ಸಂಸದ ಶ್ರೀಕಾಂತ್ ಶಿಂದೆ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಅಪರಾಧ ವಿಭಾಗವು ಪುಣೆಯ 19 ವರ್ಷದ ವಿದ್ಯಾರ್ಥಿಯನ್ನು ಬಂಧಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆರೋಪಿಯನ್ನು ಶುಭಂ ವಾರ್ಕಾಡ್ ಎಂದು ಗುರುತಿಸಲಾಗಿದೆ. ನಾಂದೇಡ್‌ ಜಿಲ್ಲೆಯ ಈತ ಪುಣೆಯಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಆರೋಪಿಯು ಫೆ.11ರಂದು ಏಕನಾಥ ಶಿಂದೆ ಮತ್ತು ಅವರ ಪುತ್ರ ಶ್ರೀಕಾಂತ್ ಶಿಂದೆ ಅವರಿಗೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಕೊಲೆ ಬೆದರಿಕೆ ಹಾಕಿದ್ದ. ತಕ್ಷಣವೇ ಕಾರ್ಯಪ್ರವೃತರಾದ ಮುಂಬೈ ಅಪರಾಧ ವಿಭಾಗದ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಜಿ-ಮೇಲ್ ಐಡಿ, ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 506(2) ಮತ್ತು 505(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.